ಮೈಸೂರು : ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿಗಳಿಗೆ ಕಂಡೀಷನ್ ಇರಲಿಲ್ಲ, ಈಗ ಕಾಂಗ್ರೆಸ್ ನವರು ಎಲ್ಲಾ ಯೋಜನೆಗಳಿಗೆ ಕಂಡೀಷನ್ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ‘ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ. . ಬಿಟ್ಟಿ ಯೋಜನೆಗಳಿಗೆ ಹಣ ಹೇಗೆ ಹೊಂದಿಸಿಕೊಳ್ಳುತ್ತೀರಾ? ತಿಳಿಸಿ ಎಂದು ಹೇಳಿದ್ದಾರೆ.
ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿಗಳಿಗೆ ಕಂಡೀಷನ್ ಇರಲಿಲ್ಲ, ಈಗ ಕಾಂಗ್ರೆಸ್ ನವರು ಎಲ್ಲಾ ಯೋಜನೆಗಳಿಗೆ ಕಂಡೀಷನ್ ಹಾಕುತ್ತಿದ್ದಾರೆ ಈಗ ಪ್ರತಿ ಮನೆಯಲ್ಲೂ ವಿದ್ಯುತ್ ಬಿಲ್ ದುಪ್ಪಟ್ಟು ಬಂದಿದೆ. ಎಲ್ಲಾದಕ್ಕೂ ಬೆಲೆ ಹೆಚ್ಚಳ ಮಾಡುತ್ತೀರಾ..? ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯದಲ್ಲಿ ಹೆಚ್ಚುವರಿ ತೆರಿಗೆ ವಿಧಿಸುತ್ತೀರಾ? ಗ್ಯಾರಂಟಿ ಜಾರಿಗೆ ಮತ್ತಷ್ಟು ಸಾಲ ಮಾಡ್ತೀರಾ? ತಿಳಿಸಿ ಎಂದು ಪ್ರಶ್ನಿಸಿದ್ದಾರೆ.