ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಇಬ್ಬರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಾಟ್ಸಾಪ್ ಸ್ಟೇಟಸ್ ನಲ್ಲಿ ಶಿಕ್ಷಕರು ಗ್ಯಾರಂಟಿ ಯೋಜನೆ ಟೀಕೆಸಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ಇಂದಿರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯ ಶಿಕ್ಷಕ ಪತ್ರೆಪ್ಪ ಮತ್ತು ಅಮರ್ ಭಗತ್ ಸಿಂಗ್ ನಗರದ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಳಿನಾಕ್ಷಿ ಅವರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಸರ್ಕಾರದ ಯೋಜನೆ ವಿರುದ್ಧ ಟೀಕಿಸಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಿಇಓ ಸುರೇಶಗೌಡ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಉತ್ತರ ನೀಡದಿದ್ದರೆ ನಿಯಮಾನಸಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.