alex Certify ಹಿಂದೂಗಳ ಹಬ್ಬ , ಆಚರಣೆ ಮೇಲೆಯೂ ಕಾಂಗ್ರೆಸ್ ‘ಕಾಕದೃಷ್ಟಿ’ ಬೀರಿದೆ ; ಜೆಡಿಎಸ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂಗಳ ಹಬ್ಬ , ಆಚರಣೆ ಮೇಲೆಯೂ ಕಾಂಗ್ರೆಸ್ ‘ಕಾಕದೃಷ್ಟಿ’ ಬೀರಿದೆ ; ಜೆಡಿಎಸ್ ಕಿಡಿ

ಬೆಂಗಳೂರು : ಹಿಂದೂಗಳ ಹಬ್ಬ , ಆಚರಣೆ ಮೇಲೆಯೂ ಕಾಂಗ್ರೆಸ್ ನ ‘ಕಾಕದೃಷ್ಟಿ’ ಬೀರಿದೆ ಎಂದು ಜೆಡಿಎಸ್ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಇಂದು ಬಿಡದಿಯಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಈ ಹಿನ್ನೆಲೆ ಜೆಡಿಎಸ್ ಟ್ವೀಟ್ ಮೂಲಕ ಕುಟುಕಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಯುಗಾದಿ ಹಿಂದೂಗಳ ಹೊಸವರ್ಷ. ಯುಗಾದಿ ಹಿಂದೂಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಅಸ್ಮಿತೆ. ಈ ಹಬ್ಬದ ಮರುದಿನದ ಸಂಭ್ರಮ ಹೊಸತೊಡಕು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚರಣೆಯ ಮೇಲೆಯೂ ‘ಕಾಕದೃಷ್ಟಿ’ ಬೀರಿದೆ. ಬಾಡೂಟವನ್ನೂ ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ.

ಪ್ರತೀ ಹಿಂದೂ ಮನೆಯಲ್ಲಿ ನಡೆಯುವಂತೆ ಕುಮಾರಸ್ವಾಮಿ ಅವರ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಅವರು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ.

ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಪ್ರಿಜ್ಡ್, ಕೂಪನ್ ಹಂಚುವ ಸತ್ಸಂಪ್ರದಾಯ ರೂಢಿಸಿಕೊಂಡಿರುವ ಕಾಂಗ್ರೆಸ್, ಕಾವೇರಿ ಅಮ್ಮನ ಹೆಸರಿನಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆಯಲ್ಲಿ ನದಿಯಂತೆ ಹರಿಸಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ, ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್ ಪಕ್ಷವನ್ನು ಅಂಟಿಕೊಂಡಿದೆ.

ಕಾಂಗ್ರೆಸ್ ಸೋಲಿನ ಹತಾಶೆಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳನ್ನು ಟೀಕಿಸುವ ಬರದಲ್ಲಿ ನಮ್ಮ ಹಿಂದೂ ಸಂಪ್ರದಾಯದ ಬಗ್ಗೆ ಅವಹೇಳನ ಮಾಡಿದೆ. ಅದರ ಕೊಳಕುತನ ಅದರ ಟ್ವೀಟ್ ನಲ್ಲಿ ಎದ್ದು ಕಾಣುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ, ದ್ರೋಹಿ ಆಗಿರುವ ಕಾಂಗ್ರೆಸ್ ಗೆ ಹೊಸತೊಡಕುಗಿಂತ ಇಫ್ತಾರ್ ಕೂಟದಲ್ಲಿಯೇ ಹೆಚ್ಚು ಪ್ರೀತಿ. ಜನ್ಮದಾರಭ್ಯ ಬಂದಿದ್ದನ್ನು ನಾವಂತೂ ಅವಹೇಳನ ಮಾಡುವುದಿಲ್ಲ ಎಂದು ಜೆಡಿಎಸ್ ಟ್ವೀಟ್ ಮೂಲಕ ಕಾಂಗ್ರೆಸ್ ಗೆ ಬಾಣ ಬಿಟ್ಟಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...