ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂಬ ಎರಡು ರಾಜಕೀಯ ಪಕ್ಷಗಳು ಮಾತ್ರ ಅಸ್ತಿತ್ವದಲ್ಲಿವೆ. ಮೂರನೇ ಪಕ್ಷ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದ್ದಾರೆ.
ಡಿಸೆಂಬರ್ ನಲ್ಲಿ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎಎಪಿಯ ಸವಾಲನ್ನು ಪ್ರಹ್ಲಾದ್ ಮೋದಿ ತಳ್ಳಿಹಾಕಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಈಗ ಶೂನ್ಯವಾಗಿದೆ ಮತ್ತು ಬಿಜೆಪಿ ತನ್ನ ಪೂರ್ಣ ಬಲಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಈಗ ಶೂನ್ಯ ಆಗಿದೆ. ಬಿಜೆಪಿ ತನ್ನ ಪೂರ್ಣ ಬಲಕ್ಕೆ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮಾತ್ರ ಕ್ಲಿಕ್ ಆಗಿವೆ ಎಂದರು. ಗುಜರಾತ್ ಚುನಾವಣೆಯಲ್ಲಿ ಅಬ್ಬರದ ಪ್ರಚಾರ ಆರಂಭಿಸಿರುವ ಎಎಪಿಯ ಭವಿಷ್ಯದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.
ದೇಶದ ಜನತೆ ಇಷ್ಟ ಪಡುವ ಪ್ರಧಾನಿಯನ್ನು ಪಡೆದಿದ್ದು, 2024ರಲ್ಲಿಯೂ ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ಪ್ರತಿಪಾದಿಸಿದರು.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದೊಂದಿಗೆ ಗುಜರಾತ್ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ನವೆಂಬರ್ 12 ರಂದು ಹಿಮಾಚಲಪ್ರದೇಶದಲ್ಲಿ ಚುನಾವಣೆ ನಡೆದಿದೆ.