ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿ, ಮೇಯರ್ ವಿಚಾರದಲ್ಲಿ ನಮ್ಮದೇನು ನಿರ್ಧಾರವಿಲ್ಲ. ನಿರ್ಧಾರವನ್ನು ಸ್ಥಳೀಯ ನಾಯಕರಿಗೆ ಬಿಡಲಾಗಿತ್ತು ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೈಸೂರು ನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ನಾಯಕರು ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.