alex Certify ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ; ವೋಟ್ ಬ್ಯಾಂಕ್ ಗೆ ದೊಡ್ಡ ಪೆಟ್ಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ; ವೋಟ್ ಬ್ಯಾಂಕ್ ಗೆ ದೊಡ್ಡ ಪೆಟ್ಟು

ಬೆಂಗಳೂರು: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ನಿಂದ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದರು. ಆದರೆ, ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಿ ಫಾರಂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತ ಪ್ರಸನ್ನ ಕುಮಾರ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುವಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಪ್ರಸನ್ನಕುಮಾರ್ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ಸೇರಿದ್ದಾರೆ. ಇದರಿಂದಾಗಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...