alex Certify BIG NEWS: ಕಾಂಗ್ರೆಸ್ ಕಾರ್ಯಕರ್ತನನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ; ಹಣ, ಚಿನ್ನಾಭರಣ ದೋಚಿ ಪರಾರಿಯಾದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಕಾರ್ಯಕರ್ತನನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ; ಹಣ, ಚಿನ್ನಾಭರಣ ದೋಚಿ ಪರಾರಿಯಾದ ಖದೀಮರು

ರಾಮನಗರ: ಕಾಂಗ್ರೆಸ್ ಕಾರ್ಯಕರ್ತನನ್ನು ಅಪಹರಿಸಿರುವ ಖದೀಮರು ಕೈಕಾಲು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿ, ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಬಳಿಯ ಕಾಡುಜಕ್ಕಸಂದ್ರದಲ್ಲಿ ನಡೆದಿದೆ.

ನಾಗರಾಜು (43) ಅಪಹರಣಕ್ಕೊಳಗಾಗಿ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ. ನಾಗರಾಜು ಅವರನ್ನು ಕಿಡ್ನ್ಯಾಪ್ ಮಾಡಿರುವ ದುಷ್ಕರ್ಮಿಗಳು ತೋಟದ ಮನೆಗೆ ಕರೆದೊಯ್ದು ಕೈಕಾಲು ಕಟ್ಟಿ ಹಾಕಿ ದೊಣ್ಣೆಯಿಂದ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಬಳಿ ಇದ್ದ ಹಣ, ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.

ಕಿಡ್ಯಾಪ್ ಮಾಡಿದ ಖದೀಮರು ಶ್ರೀನಿವಾಸ್ ಎಂಬುವವರ ತೋಟದ ಮನೆಗೆ ಕರೆದೊಯ್ದು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಗರಾಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...