ಲಕ್ನೋ: ಹತ್ಯೆಯಾಗಿರುವ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕರೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅತೀಕ್ ಸಮಾಧಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾಕಿ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ನಾಯಕ ರಾಜ್ ಕುಮಾರ್ ರಾಜು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರ ಸಾವಿನ ಕುರಿತು ಕಾಂಗ್ರೆಸ್ ನಾಯಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅತೀಕ್ ಅಹ್ಮದ್ ಸಮಾಧಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾಕಿದ್ದಲ್ಲದೆ ಭಾರತ ರತ್ನ ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಜ್ ಕುಮಾರ್ ರಾಜು ಒತ್ತಾಯಿಸಿದ್ರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭೀಕರ ಹತ್ಯೆಗೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರಾಜ್‌ಕುಮಾರ್, ಅತೀಕ್ ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು. ಯುಪಿ ಸಿಎಂ ಯೋಗಿ ಅವರೇ ಅತೀಕ್ ಹತ್ಯೆಗೆ ಸಂಚು ರೂಪಿಸಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅತೀಕ್ ಅಹ್ಮದ್ ಹುತಾತ್ಮರಾಗಿರುವ ಕಾರಣ ಅವರಿಗೆ ಭಾರತ ರತ್ನ ನೀಡಬೇಕು. ಹಾಗೂ ಯೋಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ರು.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ರಾಜ್‌ಕುಮಾರ್ ನಡೆಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.