
ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಬಲಗೈ ಬಂಟನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅಶೋಕನಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹ್ಯಾರಿಸ್ ಬಲಗೈ ಬಂಟ, ಕಾಂಗ್ರೆಸ್ ಮುಖಂಡ ಹೈದರ್ ಕೊಲೆ ಮಾಡಲಾಗಿದೆ. ಲೈವ್ ಬ್ಯಾಂಡ್ ಮುಗಿಸಿ ಹೊರ ಬರುತ್ತಿದ್ದಾಗ ಗರುಡ ಮಾಲ್ ಬಳಿ ಬೈಕ್ ಅಡ್ಡಗಟ್ಟಿ ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಲಾಂಗ್, ಮಚ್ಚುಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೌರಿಂಗ್ ಆಸ್ಪತ್ರೆಗೆ ಸಾಗಿಸುವಾಗಲೇ ಹೈದರ್ ಮೃತಪಟ್ಟಿದ್ದಾನೆ. ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.