
ಮಂಗಳೂರಿನಿಂದ ಬೆಂಗಳೂರಿಗೆ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಏರ್ಲಿಫ್ಟ್ ಮಾಡಲಾಗಿದೆ.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿದ್ದ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ನಲ್ಲಿ ರವಾನಿಸಲಾಗಿದ್ದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕೊಂಡೊಯ್ಯಲಾಗಿದೆ. ಆಸ್ಕರ್ ಫೆರ್ನಾಂಡಿಸ್ ಕುಟುಂಬದವರು ಸೇರಿದಂತೆ ವಿಶೇಷ ವಿಮಾನದಲ್ಲಿ 40 ಮಂದಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ನಾಳೆ ಬೆಳಿಗ್ಗೆ ಕೆಪಿಸಿಸಿ ಕಛೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದೆಹಲಿಯಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಆಗಮಿಸಲಿದ್ದಾರೆ. ಅಂತಿಮ ದರ್ಶನದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು.