alex Certify BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವಿಚಾರ ತಿಳಿಸಿದ್ದು, ರಾಹುಲ್ ಗಾಂಧಿಯವರು ನನಗೊಂದು ಪತ್ರ ಬರೆದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಹಾಗೂ ಆನೆ ಮರಿ ನೋಡಿದ್ದೇನೆ. ಎರಡೂ ಗಾಯಗೊಂಡಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಚಿಕಿತ್ಸೆಗೆ ಅಗತ್ಯವಿರುವ ವ್ಯವಸ್ಥೆ ಮಾಡಲಾಗುವುದು ಎಂದರು.

ಇತ್ತೀಚೆಗೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಹಾಗೂ ಮರಿ ಗಾಯಗೊಂಡಿರುವುದನ್ನು ಕಂಡಿದ್ದ ರಾಹುಲ್ ಗಾಂಧಿ ತಕ್ಷಣ ಅವುಗಳಿಗೆ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...