ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ವಿಮಾನ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ಬೆಳಿಗ್ಗೆ 9:45ಕ್ಕೆ ಸಿದ್ದರಾಮಯ್ಯ ದೆಹಲಿಯಿಂದ ಶ್ರೀನಗರಕ್ಕೆ ವಿಮಾನದಲ್ಲಿ ತೆರಳಬೇಕಿತ್ತು. ಆದರೆ ವಿಮಾನ ಹಾರಾಟ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಶ್ರೀನಗರಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ವಿಮಾನ ಹಾರಾಟ ರದ್ದಾಗಿರುವುದರಿಂದ ಶ್ರೀನಗರ ಪ್ರವಾಸ ರದ್ದು ಪಡಿಸಿದ್ದಾರೆ ಎನ್ನಲಾಗಿದೆ.