ಕಲಬುರಗಿ: ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಕ್ರಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.