
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದಾದ ನಂತರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಮತ್ತು ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಿದ್ದಾರೆ.
ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಪಕ್ಷದಲ್ಲಿನ ಬೆಳವಣಿಗೆ ಕುರಿತಾಗಿ ನಾಯಕರು ಚರ್ಚೆ ನಡೆಸಲಿದ್ದಾರೆ.