ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಿನಾಮೆಗೆ ಒತ್ತಾಯಿಸಲು ಕಾಂಗ್ರೆಸ್ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾಧ್ಯಮಗಳಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಮಾಹಿತಿ ಪಡೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೀದಾ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದ್ದಾರೆ. ಪಕ್ಷದ ನಾಯಕರ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಒತ್ತಡ ಹೇರಲು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.