
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೈಕಮಾಂಡ್ ನಾಯಕರ ಸೂಚನೆಗೂ ಯಾರೂ ತಲೆಕೆಡಿಸಿಕೊಳ್ಳುವಂತೆ ಕಾಣುತ್ತಿಲ್ಲ. ಇದೀಗ ಕಾಂಗ್ರೆಸ್ ಸಚಿವರು, ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ.
ಸುರ್ಜೇವಾಲ ವಿರುದ್ಧವೇ ದೂರು ನೀಡಲು ಹಾಗೂ ರಾಜ್ಯ ಉಸ್ತುವಾರಿಯನ್ನು ಬದಲಿಸುವಂತೆ ಒತ್ತಡ ಹೇರಲು ಕೇಲವರು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಹಿನ್ನಡೆಗೆ ಸುರ್ಜೇವಾಲ ಕಾರಣರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ನಡೆಸುದ್ದಾರೆ ಎನ್ನಲಾಗಿದೆ. ರಾಜ್ಯ ಉಸ್ತುವಾರಿಯಾಗಿರುವ ಸುರ್ಜೇವಾಲರನ್ನು ವಾಪಾಸ್ ಕರೆಸಿಕೊಳ್ಳಿ ಎಂದು ಹೈಕಮಾಂಡ್ ಗೆ ಮನವಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.