
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂಟು ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ತುಮಕೂರಿನಿಂದ ಮುದ್ದಹನುವೇಗೌಡ, ಚಿತ್ರದುರ್ಗದಿಂದ ಬಿ.ಎನ್. ಚಂದ್ರಪ್ಪ, ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗಡೆ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಟಾರ್ ಚಂದ್ರು, ಹಾಸನ ಕ್ಷೇತ್ರದಿಂದ ಶ್ರೇಯಸ್ ಪಟೇಲ್, ವಿಜಯಪುರದಿಂದ ರಾಜು ಆಲಗೂರು, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ. ಸುರೇಶ್ ಅಭ್ಯರ್ಥಿಗಳಾಗಲಿದ್ದಾರೆ ಎಂದು ಹೇಳಲಾಗಿದೆ.