ಬೆಂಗಳೂರು: ಸಿಎಂ, ಡಿಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದಿಫ್ ಸಿಂಗ್ ಸುರ್ಜೇವಾಲಾ ತೆರೆ ಎಳೆದಿದ್ದು, ಈ ಕುರಿತಾಗಿ ಯಾವುದೇ ಹೇಳಿಕೆ ನೀಡದಂತೆ ಖಡಕ್ ಸೂಚನೆ ನೀಡಿದ್ದಾರೆ.
CLP ಸಭೆಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬದಲಾವಣೆ ಯಾವುದೂ ಇಲ್ಲ ಹೇಳಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಯಾರೇ ಇರಲಿ ಅನಗತ್ಯ ಹೇಳಿಕೆ ನೀಡಬಾರದು. ರಾಹುಲ್ ಗಾಂಧಿ ಅಥವಾ ಖರ್ಗೆಯವರು ಇದನ್ನು ಸಹಿಸುವುದಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಯಾವ ಸಮಸ್ಯೆ ಇದ್ದರೂ ಸಿಎಂ, ಡಿಸಿಎಂ ಜೊತೆ ಚರ್ಚಿಸಿ. ನಾಲ್ಕು ಗೋಡೆಗಳ ಮಧ್ಯೆ ಮಾತ್ರ ಚರ್ಚಿಸಬೇಕು. ಯಾವುದೇ ಕ್ರಮದ ಬಗ್ಗೆ ಹೈಕಮಾಂಡ್ ಗೆ ಹಿಂಜರಿಕೆ ಇಲ್ಲ ಎಂಬುದು ನೆನಪಿರಲಿ. ಈಗ ನಾವು 136 ಸ್ಥಾನ ಪಡೆದುಕೊಂಡಿದ್ದೇವೆ. ಗೊಂದಲ ಮೂಡಿಸಿದರೆ 36ಕ್ಕೆ ಇಳಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.