ರಾಯಚೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ಪೂರ್ವಭಾವಿ ಸಭೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಖಂಡರು ಹೊಡೆದಾಡಿಕೊಂಡಿದ್ದಾರೆ.
ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಂಪನಗೌಡ ಬಾದರ್ಲಿ ಮತ್ತು ಬಸನಗೌಡ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪಕ್ಷದ ನಾಯಕರ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ. ಈ ಮೂಲಕ ಪಕ್ಷದ ಅಂತರಿಕ ಕಚ್ಚಾಟ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ ಎನ್ನಲಾಗಿದೆ.