
ಕೋಲಾರ: ಕೋಲಾರ ಹೊರವಲಯದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಶಾಸಕ ಸಮ್ಮುಖದಲ್ಲಿಯೇ ಕಾಂಗ್ರೆಸ್ ನಾಯಕರ ಬೆಂಬಲಿಗರು ಕೈಕೈ ಮಿಲಾಯಿಸಿಕೊಂಡಿದ್ದು, ಕೊರಳಪಟ್ಟಿ ಹಿಡಿದುಕೊಂಡು ಹೊಡೆದಾಡಿದ್ದಾರೆ ಎಂದು ತಿಳಿದುಬಂದಿದೆ.
ಸಭೆ ನಡೆಯುತ್ತಿದ್ದ ವೇಳೆ ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ಹೆಚ್.ಮುನಿಯಪ್ಪ, ನಾರಯಣಸ್ವಾಮಿ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಸಿಕೊಂಡಿದ್ದಾರೆ.