ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಎಫ್ ಐ ಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
2018ರಲ್ಲಿ ಶಾಸಕ ಸ್ಥಾನದಿಂದ ಹೈಕೋರ್ಟ್ ಅನರ್ಹಗೊಳಿಸಿತ್ತು. ಕೊತ್ತೂರು ಮಂಜುನಾಥ್ ವಿರುದ್ಧ ಫೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.
2018ರಲ್ಲಿ ಮುಳಬಾಗಿಲು ನಗರ ಠಾಣೆಯಲ್ಲಿ ಕೊತ್ತೀರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಕೊತ್ತೂರು ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಕರಣ ರದ್ದು ಪಡಿಸಲು ನಿರಾಕರಿಸಿದೆ.