ಕಲಬುರಗಿ : ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಕಾರು ಅಪಘಾತಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೇವರ್ಗಿ (ಬಿ) ಬಳಿ ನಡೆದಿದೆ.
ಕಾರಿನಲ್ಲಿ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಹಾಗೂ ಅವರ ಕಾರು ಚಾಲಕ ಇದ್ದರು ಎನ್ನಲಾಗಿದ್ದು, ಯಾವುದೇ ತೊಂದರೆಯಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದ್ದು, ಇಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.