ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ನಾಗೇಂದ್ರ ಅವರಿಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಕಾಂಗ್ರೆಸ್ ಶಾಸಕರು ಜೈಲಿನಲ್ಲಿ ಶಾಸಕ ಬಿ. ನಾಗೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಶಾಸಕರಾದ ಕಂಪ್ಲಿ ಗಣೇಶ್, ನಾ.ರಾ. ಭರತ್ ರೆಡ್ಡಿ, ಬಸವರಾಜ ಶಿವಗಂಗಾ ಅವರು ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ನಾಗೇಂದ್ರ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ನಾಗೇಂದ್ರ ಜೈಲು ಪಾಲಾಗಿದ್ದು, ಆಗಸ್ಟ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.