alex Certify BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ -ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಹತ್ತೂರು ಹೋಬಳಿಯ ಕೋಚಿಮುಲ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ಪರಿಶೀಲನೆ ನಡೆಸಲಾಗಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಹಿನ್ನಲೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...