ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್ ಕೊಡ್ತಿರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಲೋಕಾಯುಕ್ತ ಕೇಳಿದ್ದು, 8 ತಿಂಗಳು ಕಳೆದರೂ ಹಾಗೆಯೇ ಕುಳಿತಿದ್ದೀಯಲ್ಲಪ್ಪ. ಶಶಿಕಲಾ ಜೊಲ್ಲೆ ವಿಚಾರದಲ್ಲಿ ಜೊಲ್ಲು ಸುರಿಸಿಕೊಂಡು ಕುಳಿತಿದ್ದೀಯಲ್ಲಪ್ಪ. ಘನವೆತ್ತ ರಾಜ್ಯಪಾಲ ನಿನಗೆ ತಾಕತ್ತಿದ್ದರೆ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡು. ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಅವರ ಜೊತೆ ನಮಗೂ ಶಿಕ್ಷೆ ಕೊಡು ಎಂದು ವಾಗ್ದಾಳಿ ನಡೆಸಿದ್ದಾರೆ.