
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಮುಖ್ಯಸಚೇತಕ ಅಜಯಸಿಂಗ್ ಅವರು ವಿಪ್ ಜಾರಿ ಮಾಡಿದ್ದು, ಸೋಮವಾರದಿಂದ ಐದು ದಿನ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಿದ್ದಾರೆ. ಸದನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಾಧ್ಯತೆ ಮತ್ತು ಸಚಿವ ಬೈರತಿ ಬಸವರಾಜು ವಿರುದ್ಧದ ಪ್ರಕರಣದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ವಿಪ್ ಜಾರಿಗೊಳಿಸಲಾಗಿದೆ.