
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಬಹಿರಂಗವಾಗಿ ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಾನೂ ಕೂಡ ಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೋನರೆಡ್ಡಿ, ನಾನು ಒಂದು ಬಾರಿ ಕೃಷಿ ಮಂತ್ರಿಯಾಗಬೇಕು. ಒಬ್ಬ ಶಾಸಕನಾಗಿ ನಾನು ನನ್ನ ಹಕ್ಕು ಕೇಳುತ್ತಿದ್ದೇನೆ. ಒಂದು ಬಾರಿ ನನ್ನನ್ನು ಕೃಷಿ ಮಂತ್ರಿ ಮಾಡಿ ಎಂದು ಕೇಳಿದ್ದೇನೆ ಎಂದರು.
ಶಾಸಕರು ಮಂತ್ರಿಯಾಗಬೇಕು ಎನ್ನುತ್ತಾರೆ ಆದರೆ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಸಚಿವ ಸ್ಥಾನ ವಿಚಾರದಲ್ಲಿ ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.