alex Certify ಯುಪಿ ಎಲೆಕ್ಷನ್: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಪಿ ಎಲೆಕ್ಷನ್: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್ ಟಿಕೆಟ್

2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಕಾಂಗ್ರೆಸ್ ತನ್ನ ಚುನಾವಣ ಅಭ್ಯರ್ಥಿಯಾಗಿ ಹೆಸರಿಸಿದೆ. ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಕಾಂಗ್ರೆಸ್ ಪಕ್ಷದಿಂದ ಕಣ್ಣಕ್ಕಿಳಿಯಲಿದ್ದಾರೆ.

ಉತ್ತರ ಪ್ರದೇಶದ ಚುನಾವಣೆ ಜವಾಬ್ದಾರಿ ಹೊತ್ತಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹೆಸರನ್ನ ಇಂದು ಬಿಡುಗಡೆ ಮಾಡಿದ್ದಾರೆ.

2017 ರಲ್ಲಿ ಬಾಲಕಿಯ ಮೇಲಿನ ಅತ್ಯಾಚಾರದ ಆರೋಪದಲ್ಲಿ ಬಿಜೆಪಿಯ ಮಾಜಿ ನಾಯಕನಿಗೆ ಈಗಾಗ್ಲೇ ನ್ಯಾಯಾಲಯದ ಆದೇಶದಂತೆ ಜೈಲುಶಿಕ್ಷೆ ನೀಡಲಾಗಿದೆ. ನೀವು ಕಿರುಕುಳ ಮತ್ತು ಚಿತ್ರಹಿಂಸೆಗೆ ಬಲಿಯಾಗಿದ್ದರೆ, ಕಾಂಗ್ರೆಸ್ ನಿಮ್ಮನ್ನು ಬೆಂಬಲಿಸುತ್ತದೆ ಎಂಬ ಹೊಸ ಸಂದೇಶ ನೀಡಿರುವ ಪ್ರಿಯಾಂಕ, ಹುಡುಗಿಯಾದರೇನು ಆಕೆಯು ಹೋರಾಡಬಹುದು ಎಂದಿದ್ದಾರೆ.

ಈ ಬಾರಿ ʼಲಡ್ಕಿ ಹೂಂ, ಲಡ್ ಸಕ್ತಿ ಹೂಂʼ ಎಂದು ಚುನಾವಣೆ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್, 40 ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ಮೀಸಲಿಟ್ಟಿದೆ. ನಮ್ಮ ಪಕ್ಷವನ್ನು ಬಲಪಡಿಸುವುದು ಮತ್ತು ನಮ್ಮ ಅಭ್ಯರ್ಥಿಗಳು ಜನರ ಸಮಸ್ಯೆಗಳ ಬಗ್ಗೆ ಹೋರಾಡುವುದು ನಮ್ಮ ಗುರಿಯಾಗಿದೆ. ನಮ್ಮ ಪ್ರಚಾರವು ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ಇರುತ್ತದೆ. ಯುಪಿಯಲ್ಲಿ ಪ್ರಾರಂಭಿಸಿದ್ದನ್ನು ಇಲ್ಲೆ ಇದ್ದು ಮುಂದುವರಿಸುತ್ತೇನೆ ಮತ್ತು ಚುನಾವಣೆಯ ನಂತರವೂ ನಾನು ರಾಜ್ಯದಲ್ಲಿಯೇ ಇರುತ್ತೇನೆ. ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ ಎಂದು ಪ್ರಿಯಾಂಕ ಹೇಳಿದ್ದಾರೆ.

ಈ ಬಗ್ಗೆ ರಾಹುಲ್ ಗಾಂಧಿಯೂ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರಿಂದ ಉನ್ನಾವೋನಲ್ಲಿ ಯಾವ ಬಾಲಕಿಯ ಮೇಲೆ ಅನ್ಯಾಯವಾಗಿತ್ತೋ ಆ ಬಾಲಕಿಯ ತಾಯಿ ನ್ಯಾಯದ ಮುಖವಾಗುತ್ತಾರೆ, ಹೋರಾಡುತ್ತಾರೆ, ಗೆಲ್ಲುತ್ತಾರೆ ಎಂದಿದ್ದಾರೆ.

— Rahul Gandhi (@RahulGandhi) January 13, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...