alex Certify ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಆದರೆ ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತ ಮಾಡುತ್ತಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...