
ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಗ್ಯಾರಂಟಿಗಳನ್ನು ಫೆಬ್ರವರಿ 27ರಂದು ಜಾರಿಗೊಳಿಸಲಾಗುವುದು.
500 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್, 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗಳನ್ನು ಫೆಬ್ರವರಿ 27ರಂದು ಸಂಜೆಯಿಂದ ಜಾರಿಗೊಳಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಕರ್ನಾಟಕ ಮಾದರಿಯಲ್ಲಿ ಈಗಾಗಲೇ ತೆಲಂಗಾಣದಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಫೆಬ್ರವರಿ 27ರಂದು ಇನ್ನೆರಡು ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗುವುದು.