ನವದೆಹಲಿ: ಎಐಸಿಸಿ ಅಧ್ಯಕ್ಷರ ಚುನಾವಣೆ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಮತ ಎಣಿಕೆ ಪೂರ್ಣಗೊಂಡ ನಂತರ ಫಲಿತಾಂಶ ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಕೇರಳ ಸಂಸದ ಶಶಿ ತರೂರ್ ಕೂಡ ಸ್ಪರ್ಧೆಯಲ್ಲಿದ್ದು, ಯಾರೇ ಗೆದ್ದರೂ ಕೂಡ 24 ವರ್ಷದ ನಂತರ ಗಾಂಧಿಯೇತರ ಕುಟುಂಬಕ್ಕೆ ದೇಶದ ಅತ್ಯಂತ ಹಳೆಯ ಪಕ್ಷದ ಸಾರಥ್ಯ ಸಿಗಲಿದೆ. ಗಾಂಧಿ ಕುಟುಂಬದ ಬೆಂಬಲ ಹಾಗೂ ಪಕ್ಷದ ವಲಯದಲ್ಲಿ ಹೆಚ್ಚಿನ ಬೆಂಬಲ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತವೆನ್ನಲಾಗಿದ್ದು, ಮಧ್ಯಾಹ್ನದೊಳಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.