ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶನಿವಾರ ಸಂಜೆ ಜ್ವರದಂತಹ ರೋಗಲಕ್ಷಣಗಳಿಂದಾಗಿ ದೆಹಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿಗೆ ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್ಗಢ ಸರ್ಕಾರದ ಅಧಿಕೃತ ಸಮಾರಂಭದಲ್ಲಿ ಭಾಗವಹಿಸಿದ್ದ ರಾಯ್ಪುರದಿಂದ ಹಿಂದಿರುಗಿದ ನಂತರ ಅವರ ಪುತ್ರ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದರು.
ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಕ್ಕೂಟದ (ಇಂಡಿಯಾ) ಮುಂಬೈ ಸಭೆಯಲ್ಲಿ ಸೋನಿಯಾ ಗಾಂಧಿ ಇತರ ಹಿರಿಯ ವಿರೋಧ ಪಕ್ಷದ ನಾಯಕರೊಂದಿಗೆ ಭಾಗವಹಿಸಿದ್ದರು. ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.