
ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಕಾಂಗ್ರೆಸ್ ಜನಜಾಗೃತಿ ಅಭಿಯಾನ ಕೈಗೊಂಡಿದೆ. ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಜನಜಾಗೃತಿ ಅಭಿಯಾನ ನಡೆಸಲಿದೆ.
ಬೆಲೆ ಏರಿಕೆಯಲ್ಲಿ ಕೇಂದ್ರದ ಪಾತ್ರವನ್ನು ತಿಳಿಸಲು ಅಭಿಯಾನ ಕೈಗೊಳ್ಳಲಾಗಿದೆ. ಅಭಿಯಾನದ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಬೆಲೆ ಏರಿಕೆಯಲ್ಲಿ ಕೇಂದ್ರದ ಪಾತ್ರ ಕುರಿತಂತೆ ಜನರಿಗೆ ಜಾಗೃತಿ ಮೂಡಿಸಲು ಅಭಿಯಾನ ಕೈಗೊಳ್ಳಲಾಗಿದೆ.