alex Certify BIG NEWS: ಕೇಂದ್ರ ಸರ್ಕಾರದ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಬಜೆಟ್ ಬಳಿಕ ಶ್ವೇತ ಪತ್ರ ಹೊರಡಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸರ್ಕಾರದ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಬಜೆಟ್ ಬಳಿಕ ಶ್ವೇತ ಪತ್ರ ಹೊರಡಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಕಾರ್ಯಕರ್ತರು, ಯೂಥ್ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದು, ಕೇಂದ್ರದ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯವೆಸಗಿದೆ. ಅನುದಾನ ಬಿಡುಗಡೆಯಲ್ಲಿ ಅನ್ಯಾಯ ಮಾಡಿದೆ. ನಾವು ರಾಜ್ಯದ ಸಂಸದರಿಗೂ ಪತ್ರ ಬರೆದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಡಲು ಬರಲು ಕರೆ ನೀಡಿದ್ದೆವು. ಇದೊಂದು ಬೃಹತ್ ಚಳುವಳಿ. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತೇವೆ. 100 ರೂಪಾಯಿ ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಹಣ ನೀಡಬೇಕು. ಆದರೆ ಹಣ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

14ನೇ ಹಣಕಾಸು ಆಯೋಗದ ಪ್ರಕಾರ ಶೇ.42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದ ಪ್ರಕಾರ ಶೇ.41ರಷ್ಟು ಹಣ ನೀಡಬೇಕು. ಆದರೆ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ಯಪಡಿಸಿದರು.

ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ. ಬಜೆಟ್ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...