alex Certify BREAKING NEWS : ರಾಜ್ಯದಲ್ಲಿ ತಾರಕಕ್ಕೇರಿದ ‘ಅಕ್ಕಿ ಪಾಲಿಟಿಕ್ಸ್’ : ಅಕ್ಕಿ ಬೇಯಿಸಿ ವಿನೂತನವಾಗಿ ಪ್ರತಿಭಟಿಸಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ರಾಜ್ಯದಲ್ಲಿ ತಾರಕಕ್ಕೇರಿದ ‘ಅಕ್ಕಿ ಪಾಲಿಟಿಕ್ಸ್’ : ಅಕ್ಕಿ ಬೇಯಿಸಿ ವಿನೂತನವಾಗಿ ಪ್ರತಿಭಟಿಸಿದ ಕಾಂಗ್ರೆಸ್

ಬೆಂಗಳೂರು : ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಇದೀಗ ಮಳೆ ಅಡ್ಡಿಯಾಗಿದ್ದು, ಧಾರಾಕಾರ ಮಳೆ ನಡುವೆಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಅಕ್ಕಿ ಬೇಯಿಸುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯರ್ತರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಗೋವಿಂದ ಗೋವಿಂದ ಎಂದು ಕೂಗುತ್ತಾ ಅಕ್ಕಿ ಬೇಯಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದೆ.

ಇನ್ನೂ, ಕಾಂಗ್ರೆಸ್ ಪ್ರತಿಭಟನೆಗೆ ಟಕ್ಕರ್ ಕೊಡಲು ಬಿಜೆಪಿ ಕೂಡ ಪ್ರತಿಭಟನೆ ನಡೆಸಿದೆ. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಒಂದೆಡೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಮಾಜಿ ಸಚಿವ ಆರ್. ಅಶೋಕ್ ನೇತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...