alex Certify ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ: ಕಾಂಗ್ರೆಸ್ ನಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ: ಕಾಂಗ್ರೆಸ್ ನಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಿಸಲಾಗಿದೆ. 5ನೇ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

ಮಂಗಳೂರಿನ ಅಡ್ಯಾರುನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ 5 ಭರವಸೆ ಈಡೇರಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಭರವಸೆ ಈಡೇರಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾವು ಕೊಟ್ಟ ಭರವಸೆ ಈಡೇರಿಸುತ್ತೇವೆ. ಇದನ್ನು ನಿಲ್ಲಿಸಲು ಯಾರಿಂದಲೂ ಆಗಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...