ಬೆಂಗಳೂರು: ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ್ದು, 150 ಸ್ಥಾನದ ಗುರಿ ನೀಡಿದ್ದಾರೆ.
ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಮೂಹಿಕ ನಾಯಕತ್ವ ವಹಿಸಿ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಸಜ್ಜಾಗಬೇಕು. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬೇಕು ಎಂಬುದರ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾಹುಲ್ ಗಾಂಧಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.