
ಬೆಂಗಳೂರು: ಪ್ರತಿಪಕ್ಷ ನಾಯಕರ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಸಚಿವರು, ಶಾಸಕರು ಕೂಡ ಭಾಗಿಯಾಗಲಿದ್ದಾರೆ.
ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಬಿಜೆಪಿ ಕೈಗೊಂಬೆಯಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡಬೇಕು. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಬೇಕೆಂದು ಒತ್ತಾಯಿಸಲಾಗಿದೆ.