ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕೇಂದ್ರ ಸರ್ಕಾರದ ಪರವಾಗಿದೆ. ಇದು ಸಂವಿಧಾನ ವಿರೋಧಿ ಕ್ರಮವಾಗಿದ್ದು, ರಜ್ಯಪಾಲರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹೋರಾಟ ಆರಂಭಿಸಿದ್ದಾರೆ.
ರಾಜ್ಯಪಾಲರ ನಡೆ ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಲಾಗಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಳಿಕ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಹೋರಾಟ ಆರಂಭಿಸಿದ್ದಾರೆ. ರಾಜಭವನ ಚಲೋ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು, ಪರಿಷತ್ ಸದಸ್ಯರು, ಕಾರ್ಯಕರ್ತರು ಭಾಗಿಯಾಗಿದ್ದಾರೆ.