ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಶಾಕ್ ನೀಡಿದೆ.
ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ ನಡೆಸದಂತೆ ನಿರ್ಬಂಧ ಹೇರಲಾಗಿದೆ. ಈ ನಿಯಮಗಳು ಜನವರಿ 19 ರ ವರೆಗೆ ಜಾರಿಯಲ್ಲಿರುತ್ತವೆ. ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಗಾಗಿ ಜನವರಿ 9 ರಿಂದ 19ರ ವರೆಗೆ ಪಾದಯಾತ್ರೆ ಕೈಗೊಂಡಿದೆ.
ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವುದರಿಂದ ಕಾಂಗ್ರೆಸ್ ಪಾದಯಾತ್ರೆ ಕೂಡ ನಿಷೇಧವಾಗಿರುತ್ತದೆ. ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ಅವರು ಸರ್ಕಾರದ ನಿಯಮಗಳು ಎಲ್ಲ ಎಲ್ಲರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ಜನರ ಸುರಕ್ಷತೆಯ ದೃಷ್ಟಿಯಿಂದ ನಿರ್ಬಂಧ ಜಾರಿಗೊಳಿಸಿದ್ದು, ಎಲ್ಲರೂ ಪಾಲಿಸಬೇಕೆಂದು ಹೇಳಲಾಗಿದೆ.
ಆದರೆ, ಇದಕ್ಕೆ ಕಾಂಗ್ರೆಸ್ ನಿಂದ ವಿರೋಧ ವ್ಯಕ್ತವಾಗಿದೆ. ಸರ್ಕಾರ ನಿರ್ಬಂಧ ವಿಧಿಸಿದ್ದರೂ ಕೂಡ ಪಾದಯಾತ್ರೆ ಕೈಗೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಯಾವುದೇ ಅಡೆತಡೆಗೆ ಜಗ್ಗದೇ ಪಾದಯಾತ್ರೆ ಕೈಗೊಳ್ಳಲು ಕಾಂಗ್ರೆಸ್ ನಿಂದ ಸಿದ್ಧತೆ ಕೈಗೊಂಡಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ಪಾದಯಾತ್ರೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಬಿಜೆಪಿ ಚುನಾವಣೆ ರ್ಯಾಲಿ ನಡೆಸುತ್ತಿದೆ. ಪ್ರಧಾನಿ ಮೋದಿ ಚುನಾವಣೆ ಸಮಾವೇಶಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಾದಯಾತ್ರೆಗೆ ಅಡ್ಡಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.