ಬೆಂಗಳೂರು: ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತ್ಯಮೇವ ಜಯತೇ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆದಿದ್ದು, ಏಪ್ರಿಲ್ 5 ರಂದು ನಡೆಯುವ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಸಾಧ್ಯತೆ ಇದೆ.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕುರಿತಾಗಿ ನೀಡಿದ್ದ ಹೇಳಿಕೆಯಿಂದ ಎರಡು ವರ್ಷದ ಶಿಕ್ಷೆಗೆ ಗುರಿಯಾಗಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದಕ್ಕೆ ತಿರುಗೇಟು ನೀಡಲು ಕೋಲಾರದಲ್ಲಿಯೇ ಕಾಂಗ್ರೆಸ್ ಸತ್ಯಮೇವ ಜಯತೇ ಬೃಹತ್ ಸಮಾವೇಶ ನಡೆಸಲು ಪ್ಲಾನ್ ಮಾಡಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಕೋಲಾರದಲ್ಲಿ ಮಾಡಿದ್ದ ಭಾಷಣದಿಂದಲೇ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ಜಿಲ್ಲೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನೇ ಅಸ್ತ್ರವಾಗಿ ಬಳಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ.