ಚಿತ್ರದುರ್ಗ: ಜನವರಿ 8 ರಂದು ಎಸ್.ಸಿ., ಎಸ್.ಟಿ. ಸಮಾವೇಶ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ಸಮಾವೇಶಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರನ್ನು ಸೇರಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ನ ಎಸ್ಸಿ, ಎಸ್ಟಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಲ್ಲಿ ಒಬ್ಬರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ,
ರಾಜ್ಯ ಕಾಂಗ್ರೆಸ್ ನಾಯಕರು ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ ಮೊದಲಾದವರು ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ್ದಾರೆ.