alex Certify 5 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶಕ್ಕೆ ಸಿದ್ಧತೆ: ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಗೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶಕ್ಕೆ ಸಿದ್ಧತೆ: ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಗೆ ಆಹ್ವಾನ

ಚಿತ್ರದುರ್ಗ: ಜನವರಿ 8 ರಂದು ಎಸ್.ಸಿ., ಎಸ್.ಟಿ. ಸಮಾವೇಶ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ಸಮಾವೇಶಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರನ್ನು ಸೇರಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ನ ಎಸ್ಸಿ, ಎಸ್ಟಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಲ್ಲಿ ಒಬ್ಬರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ,

ರಾಜ್ಯ ಕಾಂಗ್ರೆಸ್ ನಾಯಕರು ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ ಮೊದಲಾದವರು ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...