
ನವದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿದ ಕಾಂಗ್ರೆಸ್ ನಾಯಕರಿಬ್ಬರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ.
ರಾಮದುರ್ಗ ಶಾಸಕ ಅಶೋಕ ಪಟ್ಟಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಾ ಅಮರನಾಥ್ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದಕ್ಕೆ ಸುರ್ಜೇವಾಲಾ ಗರಂ ಆಗಿದ್ದು, ನೋಟಿಸ್ ನೀಡಲು ಶಿಸ್ತು ಪಾಲನಾ ಸಮಿತಿಗೆ ಸೂಚನೆ ನೀಡಿದ್ದಾರೆ.