ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಪ್ರತಿಯೊಬ್ಬರಿಗೂ 200 ಯುನಿಟ್ ಉಚಿತ ವಿದ್ಯುತ್ ಘೋಷಿಸಲಾಗಿದೆ. ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಚುನಾವಣಾ ಪೂರ್ವ ಭರವಸೆ ನೀಡಿದ್ದು, ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಘೋಷಿಸಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ಇಂದಿನಿಂದಲೇ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇನ್ನು ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ ಬಗ್ಗೆ ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ.