ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ನಾಯಕತ್ವದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರಹಮಾನ್ ಖಾನ್ ಮತ್ತು ಸಂಚಾಲಕ ನಿವೇದಿತ್ ಆಳ್ವ ಅವರು ಈ ಬಗ್ಗೆ ಸೂಚನೆ ನೀಡಿದ್ದು, ಶಾಸಕಾಂಗ ಪಕ್ಷದ ನಾಯಕತ್ವದ ಭವಿಷ್ಯದ ಕುರಿತು ನಾಯಕರು ಹೇಳಿಕೆ ನೀಡಿರುವುದನ್ನು ಗಮನಿಸಿದ್ದು, ಇಂತಹ ಹೇಳಿಕೆ ನೀಡದಂತೆ ತಿಳಿಸಲಾಗಿದೆ.
ಪಕ್ಷದ ಏಕತೆಯ ದೃಷ್ಟಿಯಿಂದ ಎಲ್ಲ ಚುನಾಯಿತ ಪ್ರತಿನಿಧಿಗಳು, ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೇಳಿಕೆ ನೀಡದಂತೆ ತಿಳಿಸಲಾಗಿದೆ. ಇಂತಹ ಹೇಳಿಕೆ ನೀಡುವುದರಿಂದ ದೂರವಿರಬೇಕು. ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕೆಂದು ತಿಳಿಸಲಾಗಿದೆ.