ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನವೆಂಬರ್ 21 ರವರೆಗೆ ಕೆಪಿಸಿಸಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿದೆ.
ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅವಧಿ ವಿಸ್ತರಣೆ ಮಾಡುವಂತೆ ಅಭ್ಯರ್ಥಿ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರು ದಿನ ಅವಧಿ ವಿಸ್ತರಣೆ ಮಾಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿಯೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಕೆಲವು ಕ್ಷೇತ್ರಗಳಲ್ಲಿ 5 -10 ಜನ ಆಕಾಂಕ್ಷಿಗಳು ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆನ್ನಲಾಗಿದೆ.