ಬೆಂಗಳೂರು: ನಾಳೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ನಾಳೆ ಸಭೆಯಲ್ಲಿ ಪ್ರಸ್ತಾಪಿಸಬೇಕಾದ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಟಿಕೆಟ್ ನೀಡಲು ಯಾವೆಲ್ಲಾ ಮಾನದಂಡ ಅನುಸರಿಸಬೇಕು? ಜಿಲ್ಲಾ ಚುನಾವಣಾ ಸಮಿತಿ ವರದಿಗೆ ಹೆಚ್ಚಿನ ಮಾನ್ಯತೆ ನೀಡಬೇಕಾ? ಕೆಪಿಸಿಸಿ ಕಾರ್ಯಾಧ್ಯಕ್ಷರು ನೀಡಿರುವ ವರದಿಗೆ ಆದ್ಯತೆ ನೀಡಬೇಕಾ? ಸಮೀಕ್ಷೆ ವರದಿ ಬಗ್ಗೆಯ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ಕೆಪಿಸಿಸಿ ನಡೆಸಿರುವ ಸರ್ವೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಘೋಷಣೆಯ ನಂತರ ಮುಂದೆ ಯಾವ ಯೋಜನೆ ಘೋಷಣೆ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.