ಬೆಳಗಾವಿ: ಡಿನ್ನರ್ ಪಾರ್ಟಿಗೆ ಎಲ್ಲರನ್ನೂ ಕರೆಯಬೇಕೆಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಡಾ.ಜಿ. ಪರಮೇಶ್ವರ ಮನೆಯಲ್ಲಿ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ಹೇಳಿಕೆ ನೀಡಿ, ಡಿನ್ನರ್ ಗೆ ಎಲ್ಲರನ್ನೂ ಕರೆಯಬೇಕು ಅಂತೇನಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಗ್ಗೆ ಪರಮೇಶ್ವರ್ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.
ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮೊಯ್ಲಿ, ನಾನು ಹೈಕಮಾಂಡ್ ಅಲ್ಲ. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.
ಸಚಿವ ಸತೀಶ ಜಾರಕಿಹೊಳಿ ದುಬೈ ಪ್ರವಾಸಕ್ಕೆ ಹೋಗುವ ವಿಚಾರದ ಬಗ್ಗೆ ಮಾತನಾಡಿ, ಸತೀಶ ಜಾರಕಿಹೊಳಿ ಜೊತೆ ನಾನು ಯಾವುದೇ ಚರ್ಚೆ ನಡೆಸಿಲ್ಲ. ಅವರ ವೈಯಕ್ತಿಕ ವಿಚಾರಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಅಧಿಕ ಪ್ರಸಂಗದ ರಾಜಕಾರಣಿ ಅಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಜೆಪಿ -ಜೆಡಿಎಸ್ ನವರ ಬಣ್ಣ ಬಯಲಾಗಿದೆ. ಅವರ ಮೈತ್ರಿಯಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.