alex Certify BREAKING NEWS : ಅಕ್ಕಿ ನೀಡದ ಕೇಂದ್ರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ : ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಅಕ್ಕಿ ನೀಡದ ಕೇಂದ್ರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ : ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು : ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದು, ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಮುಂದಿನ ಮಂಗಳವಾರ ನಾವು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ. ಎಲ್ಲಾ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗಿಯಾಗಬೇಕೆಂದು ಈ ಮೂಲಕ ಕೋರುತ್ತಿದ್ದೇನೆ , ಯಾವ ರೀತಿ ಕಾರ್ಯಕ್ರಮ ಮಾಡಬೇಕೆಂದು ಜಿಲ್ಲೆಯ ಎಲ್ಲಾ ಶಾಸಕರಿಗೆ ಮಾರ್ಗದರ್ಶನ ಮಾಡುತ್ತೇವೆ ಎಂದರು.

ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಿದೆ, ಮೊದಲು ಎಫ್ ಸಿ ಐ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಅಕ್ಕಿ ವಿತರಿಸದೇ ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ನಾವು ಫ್ರೀಯಾಗಿ ಅಕ್ಕಿ ಕೇಳ್ತಿಲ್ಲ, ದುಡ್ಡು ಕೊಡ್ತೀವಿ ಕೊಡಿ ಎಂದು ಕೇಳುತ್ತಿದ್ದೇವೆ ಎಂದು ಡಿಕೆಶಿ ಕಿಡಿಕಾರಿದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...